namana visitor counter

Wednesday, April 21, 2010



ಸರ್ವಜ್ಞ


ಸರ್ವಜ್ಞ (ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ) ಕನ್ನಡದ ವಚನ ಸಾಹಿತ್ಯದ ಪ್ರಮುಖ ಕವಿಗಳಲ್ಲಿ ಒಬ್ಬ. ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲ ಮತ್ತು ಜೀವನಗಳ ಬಗ್ಗೆ ನಿಖರವಾಗಿ ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ 12ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ. ಪ್ರಾಯಶಃ ಪುಷ್ಪದತ್ತ ಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ.

ಜನನ ಮತ್ತು ಬಾಲ್ಯ
ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಶ್ಪದತ್ತ. ಸಾಕುತಾಯಿ ಮಲ್ಲಕ್ಕ. ತಂದೆ ಬಸವರಸ.ಹಾವೆರಿ ಜಿಲ್ಲೆಯ ಹಿರೇಕೇರೂರು ತಾಲ್ಲುಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸ, ಎಶ್ಟುದಿನಗಳಾದರೂ ಮಕ್ಕಳಾಗದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ. ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರ ಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು' ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು. ಹಗಲಿರುಳು ಪ್ರಯಾಣ ಮಾಡಿ ಅನೇಕ ಗ್ರಾಮಗಳಲ್ಲಿ ವಿಶ್ರಮಿಸಿ, ದಾರಿಯಲ್ಲಿ ಸಿಕ್ಕ 'ಅಂಬಲೂರ' ಎಂಬ ಗ್ರಾಮಕ್ಕೆ ಬರುವಾಗ ಭಯಂಕರ ಗುಡುಗು, ಸಿಡಿಲುಗಳಿಂದ ಮಳೆ ಸುರಿಯುತ್ತಿತ್ತು. ಸಮೀಪದಲ್ಲಿದ್ದ ಕುಂಬಾರಸಾಲೆ ಯಲ್ಲಿ ಕುಂಬಾರ ಮಾಳೆ ಎಂಬುವಳ ಮನೆಯಲ್ಲಿ ವಸತಿ ಮಾಡಿದನು. ಕಾಲಧರ್ಮ ಸಂಯೋಗದಿಂದ ಮಾಳಿಯಲ್ಲಿ ವ್ಯಾಮೋಹಗೊಂಡ ಬಸವರಸನಿಗೆ ಕಾಮ ವಿಕಾರವಾಯಿತು. ಕಾಶಿಯಿಂದ ತಂದ ತೀರ್ಥ ಪ್ರಸಾದಗಳನ್ನು ಕೊಟ್ಟು ಅವಳ ಸಂಗ ಮಾಡಿದನು. ೯ ತಿಂಗಳನಂತರ ಮಾಳಿ ದಿವ್ಯ ತೇಜಸ್ಸಿನ ಗಂಡು ಕೂಸಿಗೆ ಜನ್ಮವಿತ್ತಳು. 'ಪುಶ್ಪದತ್ತ'ನೆಂದು ನಾಮಕರಣವೂ ಆಯಿತು. ಮುಂದೆ ಈ ಮಗುವೇ ಜಗತ್ತಿಗೆ ಸರ್ವಜ್ಞ ನೆಂದು ಪ್ರಸಿದ್ಧಿಯಾಯಿತು. ಬಾಲ್ಯದಲ್ಲಿಯೆ ಅಗಾಧವಾದ ಪಾಂಡಿತ್ಯವನ್ನು ಶಿವನ ವರಪ್ರಸಾದದಿಂದ ಪಡೆದಿದ್ದನು. ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ಕವನಗಳಿಗೆ ಲೆಖ್ಖವಿಲ್ಲ. ಅವನು ಆಶುಕವಿಯಾದ್ದರಿಂದ, ಎಶ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು ೭,೦೭೦ ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ.

ತ್ರಿಪದಿಗಳು
ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಚರಿತ್ರಜ್ಞರ ಪ್ರಕಾರ ಇವುಗಳಲ್ಲಿ ಕೆಲವು ತ್ರಿಪದಿಗಳು ನಂತರದ ಕಾಲದಲ್ಲಿ ಬೇರಬೇರೆ ಲೇಖಕರಿ೦ದ ಬರೆಯಲ್ಪಟ್ಟಿರಬಹುದು. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವು. ಹಲವು ಒಗಟುಗಳು ಸಹ ಸರ್ವಜ್ಞನ ತ್ರಿಪದಿಗಳಲ್ಲಿ ಸೇರಿವೆ.ಸರ್ವಜ್ಞನನ್ನು ಕುರಿತು ಸರ್ವಜ್ಞಮೂರ್ತಿ ಎಂಬ ಕನ್ನಡ ಚಲನಚಿತ್ರವು ೧೯೬೫ರಲ್ಲಿ ತೆರೆಕಂಡಿತು.


ಸರ್ವಜ್ಞನೆಂಬುವನು ಗರ್ವದಿಂದಾದವನೆ?
ಸರ್ವರೊಳು ಒಂದೊಂದು ನುಡಿಗಲಿತು
ವಿದ್ಯೆಯಾ ಪರ್ವತವೆ ಆದ ಸರ್ವಜ್ಞ.

6 comments:

  1. ಸರ್ವಜ್ಞನ ಬಗ್ಗೆ ಈ ವರೆಗೆ ಗೊತ್ತಿಲ್ಲದ ಮಾಹಿತಿಯನ್ನು ತಿಳಿಸಿಕೊಟ್ಟಿದ್ದಕ್ಕೆ 'ನಮನ'.ನನ್ನ ಬ್ಲಾಗಿಗೆ ಭೇಟಿ ನೀಡಿ.

    ReplyDelete
  2. ಸರ್ವಜ್ಞ ಬಹಳ ಇಷ್ಟವಾಗುತ್ತಾನೆ...

    "ಕಚ್ಚೆ ಕೈ ಬಾಯಿಗಳು..
    ಇಚ್ಛೆಯಲಿ.. ಇದ್ದಿಹರೆ..
    ಅಚ್ಯುತನಪ್ಪ..ಅವನಪ್ಪ...
    ಲೋಕದಲಿ ನಿಶ್ಚಿಂತನಪ್ಪ..... ಸರ್ವಜ್ಞ...

    ಸರಳ ಶಬ್ಧಗಳಲ್ಲಿ ಲೋಕಜ್ಞಾನ ಹೇಳುವ ಆತ ನಿಜಕ್ಕೂ ಗ್ರೇಟ್.. !!

    ReplyDelete
  3. ನಮನ,
    ಈ ಸಲ ಫೋಟೋ ಜೊತೆಗೆ ವಿವರವನ್ನು ಹಾಕಿದೀರಿ,ತುಂಬಾ ಸಂತೋಷ..
    ಹೀಗೆ ಮುಂದುವರಿಸಿ..

    ReplyDelete
  4. ನಮನ ಅವರೇ,
    ಸರ್ವಜ್ಞ ಬಗ್ಗೆ ಒಳ್ಳೆ ಮಾಹಿತಿ ನೀಡಿದ್ದೀರಿ..ಕೊನೆಯ ತ್ರಿಪದಿ ತುಂಬಾ ಚೆನ್ನಾಗಿದೆ..
    ನಿಮ್ಮವ,
    ರಾಘು.

    ReplyDelete